ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
47 ವರ್ಷದ ಮಹಿಳೆ ಮೇಲೆ ಬೆಂಗಳೂರಿನ ಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಸಿ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮಹಿಳೆಯು ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅರುಣ್ ಪುತ್ತೂರು ವಿ.ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು