ಉತ್ತರಪ್ರದೇಶ: ಕಳೆದ ಎರಡು ದಿನಗಳಿಂದ ಉತ್ತರಪ್ರದೇಶ ಸುತ್ತ ಮುತ್ತ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವಸ್ತಗೊಂಡಿದ್ದು ಘಟನೆಯಿಂದ ರಾಜ್ಯದಲ್ಲಿ ಇದುವರೆಗೂ ಹದಿನಾಲ್ಕು ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದ ಪ್ರಮುಖ ನದಿಗಳಾದ ಗಂಗಾ, ಶಾರದ, ಗಾಗ್ರಾ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಶನಿವಾರ ಮೀರತ್‌ನಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಅಷ್ಟು ಮಾತ್ರವಲ್ಲದೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ನೀರಿನಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದು ಪರಿಹಾರ ಕಾರ್ಯಗಳು ಮುಂದುವರಿದಿವೆ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ಹೇಳಿದ್ದಾರೆ.
ಭಾರಿ ಮಳೆ ಮುನ್ಸೂಚನೆ:
ಸೋಮವಾರ (ಸೆ. 16) ಪಶ್ಚಿಮ ಉತ್ತರ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಪ್ರಕಟಿಸಿದ್ದು ಜೊತೆಗೆ ಪಶ್ಚಿಮ ಉತ್ತರ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು:
ಬುಡಾನ್‌ನಲ್ಲಿ ಗಂಗಾ ನದಿ, ಆರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಯಮುನಾ ನದಿ, ಅಲ್ಲದೆ, ಲಕ್ಷ್ಮೀಪುರ ಖೇರ್‌ನಲ್ಲಿ ಶಾರದಾ ನದಿ, ಬಾರಾಬಂಕಿ ಅಯೋಧ್ಯೆಯ ಗಾಗ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ 2.2 ಮಿಲಿಯನ್. ಮೀ. ಮಳೆ ದಾಖಲಾಗಿದೆ ಎಂದು ವಿಪತ್ತು ನಿರ್ವಹಣಾ ಆಯುಕ್ತರ ಕಚೇರಿ ಮಾಹಿತಿ ನೀಡಿದೆ.