ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.
ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಶ್ರೀ ಕೃಷ್ಣಯ್ಯ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷಣಿಕ ಸುಖಗೋಸ್ಕರ ಕೆಟ್ಟ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡುವ ಮಾಹಿತಿಯನ್ನು ಪಡೆದು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐ ಟಿ ಐ ಕಾಲೇಜ್ ಪ್ರಾಂಶುಪಾಲ ಹರೀಶ್ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಜಯರಾಮ ಪೂಜಾರಿ ಮಾಹಿತಿ ನೀಡಿ ದುರಭ್ಯಾಸಕ್ಕೆ ಕಾರಣವಾದ ಮಾದಕ ದ್ರವ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದಕ್ಕೆ ಸರಕಾರವು ಮಾದಕ ದ್ರವ್ಯಗಳನ್ನು ನಿಷೇಧ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ,ವಿದ್ಯಾರ್ಥಿಗಳು ಮಾದಕ ದ್ರವ್ಯಗಳನ್ನು ಸೇವನೆ ಮಾಡಿ ಸಮಾಜದ ಸ್ವಾಸ್ಥ್ಯ ಹಾಲು ಮಾಡುತ್ತಿದ್ದಾರೆ. ದುರಭ್ಯಾಸಗಳಾದ ಡ್ರಗ್ಸ್ , ಮಡ್ಕ , ಸಿಗರೇಟ್ ಗಳಿಂದ ಆಗುವ ಸಮಸ್ಯೆ ಬಗ್ಗೆ ವಿವರಿಸಿದರು
ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಜನಜಾಗೃತಿ ವೇದಿಕೆ ಸದಸ್ಯರಾದ ನಟೇಶ ವಿಟ್ಲ , ಕಾಲೇಜ್ ಉಪನ್ಯಾಸಕರು, ಸೇವಪ್ರತಿನಿದಿ ಆಶಾ, ಕುಮಾರಿ ಚೇತನ ಉಪಸ್ಥಿತರಿದ್ದರು.
ಉಪನ್ಯಾಸಕ ಮಂಜೇಶ್ ಪ್ರಾರ್ಥಿಸಿ, ಉಪನ್ಯಾಸಕಿ ಜ್ವಯಲಿನ್ ಸ್ವಾಗತಿಸಿ, ಉಪನ್ಯಾಸಕ ಶರತ್ ವಂದಿಸಿ, ವಲಯ ಮೇಲ್ವಿಚಾರಕರಾಕಿ ಸರಿತಾ, ಕಾರ್ಯಕ್ರಮ ನಿರೂಪಿಸಿದರು.