ರಸ್ತೆಯಲ್ಲಿ ಕೆಸರೆರಚಿದ್ದಕ್ಕೆ ಅವಮಾನಗೊಂಡು ವಿದ್ಯಾರ್ಥಿನಿ ಮೇಲೆ ವ್ಯಕ್ತಿ ಹಾಗೂ ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿನಿ ತನ್ನ ಕುಟುಂಬಕ್ಕೆ ತಿಳಿಸಿದ್ದು, ನಂತರ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.