ಗನ್ ಶೂಟ್ ಮಾಡಿಕೊಂಡ ಬಾಲಿವುಡ್ ಖ್ಯಾತ ನಟ..!!

Share with

ಬಾಲಿವುಡ್ ಇಂಡಸ್ಟ್ರಿಯ ಖ್ಯಾತ ನಟ ಗೋವಿಂದ ಬಗ್ಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಅವರ ಅಭಿಮಾನಿಗಳ ಆತಂಕವನ್ನು ಹೆಚ್ಚಿಸಿದೆ. ಹಿರಿಯ ನಟ ಗೋವಿಂದ ಗನ್‌ ನಿಂದ ಶೂಟ್‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬಾಲಿವುಡ್ ನಟ ಗೋವಿಂದ ಅವರದೇ ಗನ್ ನಿಂದ ಗುಂಡನ್ನು ಹಾರಿಸಿಕೊಂಡಿದ್ದಾರೆ. ಗುಂಡು ನಟ ಗೋವಿಂದ ಅವರ ಕಾಲಿಗೆ ತಗುಲಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಹೊರಗೆ ಹೊರಡುವ ಮುನ್ನ ನಟ ಗೋವಿಂದ ತಮ್ಮ ಗನ್ ಚೆಕ್ ಮಾಡುತ್ತಿದ್ದ. ಆ ಸಮಯದಲ್ಲಿ ಅವರು ಮಿಸ್ ಫೈರ್ ಮಾಡಿದ್ದಾರೆ.

ಈ ವೇಳೆ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಅವರನ್ನು CRITI ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋವಿಂದನ ಕಾಲಿನಲ್ಲಿದ್ದ ಗುಂಡನ್ನು ಹೊರ ತೆಗೆಯಲಾಗಿದೆ. ಅವರ ಸ್ಥಿತಿ ನಾರ್ಮಲ್‌ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗುಂಡು ಹಾರಿದ ವೇಳೆ ಗೋವಿಂದ ಮನೆಯಲ್ಲಿ ಒಬ್ಬರೇ ಇದ್ದರು. ಆಗ ತಪ್ಪಾಗಿ ಗುಂಡು ಹಾರಿದ್ದು, ಗಾಯಗೊಂಡಿದ್ದಾರೆ. ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿದೆ. ಗುಂಡು ಹಾರಿಸಿದ ನಂತರ, ತಮ್ಮ ಸಂಬಂಧಿಕರಿಗೆ ಕರೆ ಮೂಲಕ ತಿಳಿಸಿದ್ದಾರೆ. ಸಂಬಂಧಿಕರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆಯ ಸುದ್ದಿ ತಿಳಿದ ತಕ್ಷಣ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಗೋವಿಂದನ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳಿಂದ ನಿರಂತರ ಪ್ರಾರ್ಥನೆಗಳು ನಡೆಯುತ್ತಿವೆ.


Share with

Leave a Reply

Your email address will not be published. Required fields are marked *