ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಗಳು, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು ಪಂಚಾಯತ್ ನ ಸಹಕಾರದೊಂದಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ನಾಗೇಶ್ ಕುಮಾರ್ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿ ಆಚರಣೆಯ ಮಹತ್ವವನ್ನು ತಿಳಿಸಿದರು .
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸ್ಥಳೀಯ ನಾಗರಿಕರು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳು, ಸಹ ಯೋಜನಾಧಿಕಾರಿಗಳು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕ, ಸೇವಕಿ ಪಾಲ್ಗೊಂಡರು .
ಕಾರ್ಯಕ್ರಮದ ಭಾಗವಾಗಿ ಸಂಪ್ಯ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ಮಾಡಲಾಯಿತು.