
ಉಪ್ಪಳ: ಶ್ರೀ ಭಗವತೀ ಯುವಜನ ಸಂಘದ ಆಶ್ರಯದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೇಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಚಾರಪಟ್ಟವರಿಗೆ, ಗುರಿಕಾರರುಗಳಿಗೆ ಹಾಗೂ ಕ್ಷೇತ್ರಕ್ಕೆ ಒಳಪಟ್ಟ ತರವಾಡು ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.





