ರಾಜ್ಯದ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ -ಯು.ಟಿ. ಖಾದರ್

Share with

ಮಂಗಳೂರು; ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣ ಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ ರಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನ ಗೊಂಡಿದೆ.ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲ ವಾಗಲಿದೆ ಎಂದು ಖಾದರ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠ ಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು ಆಗ ಉತ್ತಮ ಶಾಸನಗಳು ಜಾರಿಯಾಗಬಹುದು. ವಿಧಾನ ಸಭಾ ಕಲಾಪ ವ್ಯರ್ಥ ವಾಗದಂತೆ ನಿಭಾ ಯಿಸುವ ಹೊಣೆಗಾರಿಕೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.ಸರಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯ ವಾಗುತ್ತದೆ ಈ ನಿಟ್ಟಿನಲ್ಲಿ ಸ್ಪೀಕರ್ ನ ಪಾತ್ರವೂ ಮಹತ್ವ ದ್ದಾಗಿದೆ ಎಂದು ಖಾದರ್ ತಿಳಿಸಿದ್ದಾರೆ.

ಸದನದಲ್ಲಿ ಪರಸ್ಪರ ಆರೋಪ ಸಹಜ ಒಂದು ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ.ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲ ವಾಗುತ್ತದೆ.ಸದನದಲ್ಲಿ ಹೊಸದಾಗಿ ಆಯ್ಕೆ ಯಾದ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿ ರುವುದಾಗಿ ತಿಳಿಸಿದ್ದಾರೆ.

ಮಾಧ್ಯಮ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗ ಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗ ಳೂರು,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್ ಉಪಸ್ಥಿತರಿದ್ದರು. ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂ ಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.


Share with

Leave a Reply

Your email address will not be published. Required fields are marked *