Bigg Boss ನಿರೂಪಣೆಗೆ ಗುಡ್ ಬೈ ಹೇಳಿದ “ಕಿಚ್ಚ”..!! ಸುದೀಪ್ ದಿಢೀರ್ ಘೋಷಣೆ..!!

Share with

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್‌ ಬೈ ಘೋಷಿಸಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್‌ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ.

‘ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *