ಮಲಗಿದ್ದ ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ..! ಮಹಿಳೆ ಗಂಭೀರ

Share with

ಸುಳ್ಯ: ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಅದೇ ಬೆಂಕಿ ವ್ಯಾಪಿಸಿ ವ್ಯಕ್ತಿಗೂ ತಗುಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಅ.12 ರಂದು ನಡೆದಿದೆ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ವಿವಾದದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಗಂಭೀರಾವಸ್ಥಯಲ್ಲಿದ್ದಾರೆ ಎಂದು ಹೇಳಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *