ಮಂಗಳೂರಿನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿ ಮೇಲೆ ಜಲ್ಲಿ ಕಲ್ಲು ಸುರಿದಿರುವ ಆಗಂತುಕರು

Share with

ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಆತಂಕ ಉಂಟಾಗಿತ್ತು. ತಡರಾತ್ರಿ ಸುಮಾರಿಗೆ ತೊಕ್ಕೊಟ್ಟುವಿನ ರೈಲ್ವೇ ಹಳಿಯಲ್ಲಿ ಘಟನೆ ನಡೆದಿದೆ. ರೈಲೊಂದು ಕೇರಳ ಕಡೆಗೆ ತೆರಳಿದ ವೇಳೆ ದೊಡ್ಡ ಶಬ್ದ ಕೇಳಿಸಿತ್ತು, ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಕೇಳಿತ್ತು. ಕೆಲವು ಮಂದಿ ಭೂಕಂಪವಾಗಿರಬಹುದು ಎಂದುಕೊಂಡಿದ್ದರು.

ಬಳಿಕ ರೈಲ್ವೆ ಹಳಿ ಕಡೆಯಿಂದ ಶಬ್ದ ಕೇಳಿದ್ದರಿಂದ ಆ ಕಡೆಗೆ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ, ಆಗ ಹಳಿ ಮೇಲೆ ಜಲ್ಲಿಕಲ್ಲುಗಳನ್ನು ಸುರಿದಿರುವುದು ಕಂಡುಬಂದಿದೆ. ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರ ಮಾಹಿತಿ ನೀಡಲಾಗಿದೆ.


Share with

Leave a Reply

Your email address will not be published. Required fields are marked *