ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ

Share with

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ  ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ  ಕಾಲೇಜಿನ  ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ  ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಬುಧವಾರ ಚಾಲನೆ ನೀಡಲಾಯಿತು.
ಜೆಸಿಐ ವಲಯ ತರಬೇತುದಾರ   ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸಿ ಮಾತನಾಡಿ ದೂರದೂರುಗಳಿಂದ ಬರುವ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಯೋಜನೆ ಜಾರಿಗೊಳಿಸಿರುವುದು ಅಭಿನಂದನೀಯ, ವಿದ್ಯಾರ್ಥಿಗಳು ಇದರ  ಮಹತ್ವವನ್ನು ಅರಿತುಕೊಂಡು ಯೋಜನೆ ಯಶಸ್ವಿಯಾಗಿ ಸಾಕಾರಗೊಳ್ಳಲು ಸಹಕರಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಸುಯೋಗವರ್ಧನ್ ಡಿ.ಎಂ. ಅವರು ಮಾತನಾಡಿ ಕೋವಿಡ್ ಬಳಿಕ ಕಾರಣಾಂತರಗಳಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಆಡಳಿತ ಮಂಡಳಿಯ ತೀರ್ಮಾನದಂತೆ ಈ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಸ್ವಾಗತಿಸಿದರು, ಕನ್ನಡ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Share with

Leave a Reply

Your email address will not be published. Required fields are marked *