
ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ನಿಧನರಾದ ಮಂಗಳೂರಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಐದು ಜನರಿಗೆ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಗ್ಲೋರಿಯಾ ರೊಡ್ರಿಗಸ್ (23) ಅವರ ಯಕೃತ್ತನ್ನು ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.





