ಕನ್ನಡದ ಮತ್ತೊಬ್ಬ ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಕಿರುತೆರೆಯಲ್ಲಿ ಬ್ರಹ್ಮಗಂಟು ಹಾಗೂ ನಿನ್ನಿಂದಲೇ ಧಾರಾವಾಹಿಯಲ್ಲಿ ಸಹ ನಟಿಸಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಾ ನೆಲೆಸಿದ್ದರು. ಕಳೆದ ವರ್ಷ ಮದುವೆ ಮಾಡಿಕೊಂಡಿದ್ದ ಶೋಭಿತಾ ಶಿವಣ್ಣ ಅರು ಇದೀಗ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿರೊ ಮಾಹಿತಿ ಇದೆ. ಸದ್ಯ ಫಸ್ಟ್ ಡೇ ಫಸ್ಟ್ ಶೋ ಸಿನಿಮಾದಲ್ಲಿ ನಟಿ ಶೋಭಿತಾ ಶಿವಣ್ಣ ನಟಿಸಿದ್ದರು. ಕಳೆದ ಎರಡುವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ಮದುವೆಯಾಗಿ ಸೆಟಲ್ ಆಗಿದ್ದರು. ಇನ್ನು ನಟಿ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ನಿನ್ನೆ ರಾತ್ರಿ ನಡೆದಿರೋ ಘಟನೆ ಅನ್ನೋ ಮಾಹಿತಿ ಇದೆ. ಮದುವೆ ಆದಾಗಿನಿಂದ ಸಿನಿಮಾ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದರು. ಹೈದರಾಬಾದ್‌ನಲ್ಲಿ ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರಲಾಗುವುದು ಎಂದು ಹೇಳಲಾಗಿದೆ.