ಬೋಟ್ ದುರಂತ: ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Share with

ಮುಂಬೈ ಬೋಟ್ ದುರಂತದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.

ಸತ್ತವರಲ್ಲಿ ಮೂವರು ನೌಕಾಪಡೆ ಸಿಬ್ಬಂದಿಗಳಾಗಿದ್ದಾರೆ. ಈ ವರೆಗೆ 101 ಜನರನ್ನು ರಕ್ಷಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಗುಹೆಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಫೆರಿ ಬೋಟ್‌ಗೆ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.


Share with