
ಉಪ್ಪಳ: ಅಂಬಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಜ.22ರಿಂದ 30ರ ತನಕ ವರ್ಷಾವಧಿ ಕ್ಷೇತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶನಿವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಸಭೆಯಲ್ಲಿ ಉದ್ಯಮಿ ಶ್ರೀಧರ ಶೆಟ್ಟಿ ಮುಟ್ಟಂ ಯಾಮಿನಿ ಎಸ್ಟೇಟ್, ಕ್ಷೇತ್ರದ ಗೌರವಾಧ್ಯಕ್ಷ ಕೊರಗಪ್ಪ ಶೆಟ್ಟಿ, ಆಡಳಿತ ಮೊಕ್ತೇಸರ ಎಚ್.ಕೆ ಶೆಟ್ಟಿ, ಮೊಕ್ತೇಸರುಗಳಾದ ನವೀನ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಕೇಶವ ಪಂಜ, ಸೇವಾ ಸಮಿತಿ ಅಧ್ಯಕ್ಷ ಪಿ.ಕೆ ಕಿಂಞಣ್ಣ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಅಂಬಾರು, ಕ್ಷೇತ್ರದ ಪ್ರಧಾನ ಅರ್ಚಕ ವಾಸುದೇವ ಹೊಳ್ಳ, ಸಹ ಅರ್ಚಕ ಗಣೇಶ ರಾಯ, ಹಾಗೂ ಆಡಳಿತ ಸಮಿತಿ, ಸೇವಾ ಸಮಿತಿ, ಉತ್ಸವ ಸಮಿತಿ, ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಬಾಲಕೃಷ್ಣ ಅಂಬಾರು ಸ್ವಾಗತಿಸಿ, ಉತ್ಸವ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ವಂದಿಸಿದರು. ರಮೇಶ್ ಅಂಬಾರು ಪ್ರಾರ್ಥನೆ ಹಾಡಿದರು.





