ಚಿಕ್ಕಮಗಳೂರು: ಶರಣಾದ ನಕ್ಸಲರು ಬಳಸುತ್ತಿದ್ದ AK 56 ಗನ್ ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆ

Share with

ಚಿಕ್ಕಮಗಳೂರು: ಶರಣಾದ ನಕ್ಸಲರು ಬಳಸುತ್ತಿದ್ದ AK 56 ಗನ್ ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆ
ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿಯಾಗಿದ್ದಾರೆ. ಶರಣಾಗತಿಯಾದ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರ ಎಲ್ಲಿವೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸ್ ಇಲಾಖೆ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ.

ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರವಾಗ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿದೆ. ನಕ್ಸಲರು ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ನಕ್ಸಲರ ಬಳಿ‌ ಇದ್ದ ಶಸ್ತ್ರಾಸ್ತ್ರ, ಮದ್ದು ಗುಂಡು ವಿವರ
ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆಯಾಗಿವೆ. ಜೊತೆಗೆ ಹನ್ನೊಂದು 7.62ಎಂಎಂ AK ammunitions, 303 ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳು ಪತ್ತೆಯಾಗಿವೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1ಎ) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಾಗಿದೆ.

ಶರಣಾಗತಿಯಾದ ನಕ್ಸಲರು ಪೊಲೀಸ್ ತನಿಖೆಗೆ ಸಹಕಾರ ನೀಡಬೇಕು. ಪೊಲೀಸರು, ಯೋಧರು, ಸಾರ್ವಜನಿಕರನ್ನು ನಕ್ಸಲರು ಕೊಂದಿದ್ದಾರೆ. ನಕ್ಸಲರಿಗೆ ಸಹಕಾರ ನೀಡಿದ್ದು ಯಾರು ಅಂತಾ ಮಾಹಿತಿ ನೀಡಬೇಕು. ನಕ್ಸಲರದ್ದು ಅಪಾಯಕಾರಿ ಸಿದ್ಧಾಂತವಾಗಿದೆ. ಒಂದು ತಂತ್ರಗಾರಿಕೆ ಭಾಗವಾಗಿ ನಕ್ಸಲರು ಶರಣಾಗಿದ್ದಾರೆ ಅನಿಸುತ್ತೆ. ಆರೂ ಮಂದಿ ನಕ್ಸಲ್ ಸಿದ್ಧಾಂತದಿಂದ ಹೊರಬಂದ ಬಗ್ಗೆ ಖಚಿತವಾಗಬೇಕು. ಕೇವಲ ಐಸೋಲೇಟೆಡ್ ಆಗಿ ನಲ್ಕು ಜನರಿಗೆ ಸೀಮಿತವಾಗಬಾರದು. ಇದರ ಹಿಂದೆ ಯಾರಿದ್ದಾರೆ ಎಂದು ಎನ್ಐಎ ತನಿಖೆ ಮಾಡಬೇಕು ಎಂದರು.


Share with

Leave a Reply

Your email address will not be published. Required fields are marked *