
ಬೇಕೂರು :ಕುಬಣೂರು ಶ್ರೀರಾಮ ಐಡೆಡ್ ಅಪ್ಪರ್ ಪ್ರೈಮರಿ ಶಾಲಾ ವರ್ಧಂತ್ಯುತ್ಸವ ಜ.16ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ಜರಗಲಿದೆ. ಬೆಳಿಗ್ಗೆ 9.30ಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ರೈ ದ್ವಜಾರೋಹಣವನ್ನು ನೆರವೇರಿಸುವುದರೊಂದಿಗೆ ವರ್ದಂತ್ಯುತ್ಸವಕ್ಕೆ ಚಾಲನೆ ನೀಡುವರು. 10ಗಂಟೆಗೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, 10.30ಕ್ಕೆ ನಡೆಯುವ ವರ್ಧಂತಿ ಸಭೆಯನ್ನು ಮಂಗಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಬೀನ ನೌಫಲ್ ಉದ್ಘಾಟಿಸುವರು. ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ರಾಜಗೋಪಾಲ್‌ರವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಲಂಚುಲಾಲ್ ಕೆ.ಎಸ್, ಮಂಜೇಶ್ವರ ಬಿ.ಪಿ.ಸಿ ಇದರ ಜೋಯ್.ಜಿ ಮೊದಲಾದವರು ಉಪಸ್ಥಿತರಿರುವರು. ರಾತ್ರಿ 8.30ರಿಂದ ಹಳೆ ವಿದ್ಯಾರ್ಥಿಗಳಿಂದ ಯಕ್ಷಗಾನ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಲಿದೆ.





