
ಕೊಡಗು: ನೂತನವಾಗಿ ನಿರ್ಮಾಣಗೊಂಡಿದ್ದ ಸಿಎನ್ಜಿ ಘಟಕದಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಮಕ್ಕಳ ಆರೋಗ್ಯದಲ್ಲಿ ಏರುಪೇರಾದ ಘಟನೆ ಕೊಡಗಿನಲ್ಲಿ ನಡೆದಿದೆ.

ಇಲ್ಲಿನ ಕುಶಾಲನಗರ ತಾಲೂಕಿನ ಕೂಡೂರು ಬಡಾವಣೆಯಲ್ಲಿ ನಿರ್ಮಿಸಲಾಗಿದ್ದ ಸಿಎನ್ಜಿ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆಯಾಗಿ, ಆರೋಗ್ಯದಲ್ಲಿ ಏರುಪೇರಾಗಿದೆ. ಮಕ್ಕಳಲ್ಲಿ ವಾಂತಿ, ವಾಕರಿಗೆ ಹಾಗೂ ಅಸ್ವಸ್ಥತೆ ಉಂಟಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




