

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಹಲವು ಜಿಲ್ಲೆಗಳಲ್ಲಿ ಜನರು ಗ್ರಾಮ ತೊರೆಯುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ ಫೈನಾನ್ಸ್ನವರ ಕಿರುಕುಳ ತಾಳಲಾರದೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ನಡುವೆ ಹಾವೇರಿಯ ಮಹಿಳೆಯೊಬ್ಬರು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯರಿಗೆ ತಮ್ಮ ತಾಳಿಯನ್ನು ಪೋಸ್ಟ್ ಮಾಡಿದ್ದು, ತನ್ನ ಕುಟುಂಬವನ್ನು ಉಳಿಸುವಂತೆ ಮನವಿ ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆ ಹಿನ್ನೆಲೆ ರಾಜ್ಯ ಸರ್ಕಾರ ಈ ಬಗ್ಗೆ ಚರ್ಚಿಸಲು ಮಹತ್ವದ ಸಭೆ ಕರೆದಿದೆ.
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಸಾಲದ ಬಾಧೆಗೆ ಸಿಲುಕಿ ಅನೇಕರು ಊರು, ಮನೆ ಬಿಟ್ಟು ಹೋಗಿದ್ದಾರೆ. ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಚರ್ಚೆ ನಡೆಸಲು ಮುಂದಾಗಿದೆ.
ಸರ್ಕಾರ, ಜ. 25ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಿದ್ದು, ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.




