
36 ಜೀವರಕ್ಷಕ ಔಷಧಿಗಳ ಮೇಲಿನ ಸುಂಕ ತೆರಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ನಿರ್ಮಿಸಲಾಗುವುದು. ಕ್ಯಾನ್ಸರ್ ಚಿಕಿತ್ಸೆಗೆ ಔಷಧಗಳು ಅಗ್ಗವಾಗಲಿದ್ದು, 6 ಜೀವ ರಕ್ಷಕ ಔಷಧಿಗಳ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 5ಕ್ಕೆ ಇಳಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಕೇಂದ್ರದ ಈ ಕ್ರಮದಿಂದಾಗಿ ಔಷಧಿಗಳ ಬೆಲೆ ಕಡಿಮೆಯಾಗಲಿದೆ.




