
ಪ್ರಯಾಗ್ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಪ್ರಧಾನಿಯವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಫೆ.5ರಂದು ಪ್ರಧಾನಿ ಮೋದಿ ಸಂಗಮದಲ್ಲಿ ಮಿಂದೆದ್ದು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ’ ಎಂದು ಮಾಹಿತಿ ನೀಡಿದೆ ಜ.13ರ ಪೌಶ್ ಪೌರ್ಣಮಿಯಂದು ಆರಂಭವಾದ ಕುಂಭ ಮೇಳ ಫೆ.26ರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ.




