
ಭಾರತದಲ್ಲಿ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. 1928ರಲ್ಲಿ ರಾಮನ್ ಎಫೆಕ್ಟ್ ಕಂಡುಹಿಡಿದ ವಿಜ್ಞಾನಿ ಸರ್ ಸಿವಿ ರಾಮನ್ ಅವರ ಗೌರವಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನ ಸೆಲೆಬ್ರೇಟ್ ಮಾಡಲಾಗುತ್ತದೆ. ರಾಮನ್ ಎಫೆಕ್ಟ್ ಆವಿಷ್ಕಾರಕ್ಕಾಗಿ ಅವರು ನೊಬೆಲ್ ಪ್ರಶಸ್ತಿ ಪಡೆದಿದ್ದರು.

ಜನಸಾಮನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ಸಹ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮೂಲ ಉದ್ದೇಶವಾಗಿದೆ. ರಾಮನ್ ಪರಿಣಾಮಕ್ಕಾಗಿ ವಿಜ್ಞಾನ ವಿಭಾಗದಿಂದ ನೊಬೆಲ್ ಪಡೆದ ಏಷ್ಯಾದ ಮೊಟ್ಟ ಮೊದಲ ವಿಜ್ಞಾನಿ ಎಂಬ ಖ್ಯಾತಿ ಸರ್ ಸಿ ವಿ ರಾಮನ್ ರವರಿಗಿದೆ.
ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28 ರಂದು ಆಚರಿಸಬೇಕು ಎಂದು 1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ (NCSTC) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಎನ್ಸಿಎಸ್ಟಿಸಿ’ಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಣೆ ಮಾಡಿತು. ನಂತರ ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು 1987 ಫೆಬ್ರವರಿ 28 ರಂದು ಭಾರತೀಯರು ಆಚರಣೆ ಮಾಡಿದರು.
ಸರ್ಕಾರದ ಕಚೇರಿಗಳು, ಖಾಸಗಿ ಕಂಪನಿಗಳು, ಸಂಸ್ಥೆಗಳು, ವಿಶೇಷವಾಗಿ ವಿಜ್ಞಾನ, ತಂತ್ರಜ್ಞಾನ, ಸಂಶೋಧನಾ ಸಂಸ್ಥೆಗಳು ಮತ್ತು ಕಂಪನಿಗಳಲ್ಲಿ ಈ ದಿನವನ್ನು ಆಚರಣೆ ಮಾಡಿ, ರಾಮನ್ ಪರಿಣಾಮದ ಅನುಕೂಲಗಳನ್ನು ಸ್ಮರಿಸಲಾಗುತ್ತದೆ. ಸರ್ ಸಿ ವಿ ರಾಮನ್ರವರಿಗೆ ಗೌರವ ಅರ್ಪಣೆ ಮಾಡಲಾಗುತ್ತದೆ.




