
ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಹೆಚ್ಚಳ ಹಿನ್ನೆಲೆ ಕೆಲ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ನೀಡಿದೆ.

ನಿಂಬೆ ಹಣ್ಣಿನ ಜ್ಯೂಸ್, ಮಜ್ಜಿಗೆ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಿ. ಹೆಚ್ಚು ನೀರಿನಂಶ ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸಿ.
ಹೆಚ್ಚು ಬಿಸಿಲು ಬೀಳದಂತೆ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ತಿಳಿ ಬಣ್ಣದ, ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಿ ಎಂದು ಸಲಹೆ ನೀಡಿದೆ.




