ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ ಈ ಬಾರಿಯ ಬಜೆಟ್ನಲ್ಲಿ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ರಾಜ್ಯದಲ್ಲಿ ಮದ್ಯದ ದರ ಮತ್ತಷ್ಟು ಏರಿಕೆಯಾಗಲಿದೆ. ಸರಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದ್ದು, ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯ ಸರಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧಾರ ಮಾಡಿದೆ. ಈ ಕುರಿತು ಸಿಎಂ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.




