ಲಾರಿ-ಇನೋವಾ ಕಾರು ನಡುವೆ ಅಪಘಾತ; ಐವರು ಮೃತ್ಯು

Share with

ಚಿತ್ರದುರ್ಗ :  ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಸಿಬಾರ ಗ್ರಾಮದ ಬಳಿ  ಮಾ.9 ರಂದು ನಡೆದಿದೆ .
ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದ್ದು, ಸವದತ್ತಿಯ ರೇಣುಕಾ ಯಲ್ಲಮ್ಮ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (60), ವಿದ್ಯಾರಣ್ಯಪುರದ ರುದ್ರಸ್ವಾಮಿ (52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ (50), ನಿರ್ದೇಚಿದಂಬರಾಚಾರ್‌ (52) ಮೃತ ವ್ಯಕ್ತಿಗಳು. ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.


Share with

Leave a Reply

Your email address will not be published. Required fields are marked *