ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ:  ಗೂಢಚಾರನ ಬಂಧನ

Share with


ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಬಿಇಎಲ್‌ನ ಪ್ರಾಡಕ್ಟ್ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್‌ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.


Share with

Leave a Reply

Your email address will not be published. Required fields are marked *