
ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಮಾ. 22ರಂದು ಕೋಜಿ ಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21) ಮೃತಪಟ್ಟವಳು ಎಂದು ತಿಳಿದು ಬಂದಿದೆ.

ಡಿ. 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿ ಸಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು.




