
ಉಡುಪಿ: ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಲಾರಿ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಮಾ.23ರಂದು ನಡೆದಿದೆ.ಘಟನ ಸ್ಥಳಕ್ಕೆ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಅಂಬಲಪಾಡಿ ಜಂಕ್ಷನ್ ಬಳಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ.





