Kerala : ಶರ್ಟ್ ತೆಗೆಯದೆ ಅಯ್ಯಪ್ಪ ದೇವಾಲಯ ಪ್ರವೇಶಿಸಿದ ಭಕ್ತರು

Share with

ಕೇರಳ : ಶರ್ಟ್ ತೆಗೆಯದೆ ಭಕ್ತರು ಕೇರಳದಲ್ಲಿಯೇ ದೇವಾಲಯ ಪ್ರವೇಶಿಸಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪೆರುನಾಡಿನ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರು ಭಾನುವಾರದಂದು ಅಂಗಿ ತೆಗೆಯದೆ ಪ್ರವೇಶಿಸಿ, ದೀರ್ಘಕಾಲದ ಸಂಪ್ರದಾಯಕ್ಕೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭಟನೆಯಲ್ಲಿ, SNDP ಸಂಯುಕ್ತ ಸಮರ ಸಮಿತಿಯ ಸದಸ್ಯರು ಅಂಗಿ ತೆಗೆಯದೆ ಸರತಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು.

ಟ್ರಾವಂಕೂರ್ ದೇವಸ್ವಂ ಮಂಡಳಿ (TDB) ನಿರ್ವಹಿಸುವ ಈ ದೇವಸ್ಥಾನದಲ್ಲಿ, ಪುರುಷ ಭಕ್ತರು ಅಂಗಿ ತೆಗೆದು ಪ್ರವೇಶಿಸುವುದು ಸಂಪ್ರದಾಯವಾಗಿತ್ತು. ಈ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿ ಭಕ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಪೋಲೀಸರು ಅಥವಾ ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಪ್ರತಿಭಟನಾಕಾರರು, ಭಕ್ತರು ಅಂಗಿ ತೆಗೆಯುವ ಸಂಪ್ರದಾಯವನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.


Share with

Leave a Reply

Your email address will not be published. Required fields are marked *