
ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಕಹಿ ಸುದ್ದಿ. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದ್ರೆ ಇದೀಗ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.




