
ಬೆಂಗಳೂರು: ಇನ್ನು ಮುಂದೆ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ಪ್ರಸಾದವು ನಿಮ್ಮ ಬಾಗಿಲಿಗೇ ಬರಲಿದೆ. ದೇಗುಲದಿಂದ ಕಲ್ಲು ಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಬಿಲ್ವಪತ್ರೆ, ಕುಂಕುಮ, ಹೂವಿನ ಪ್ರಸಾದವನ್ನು ಮನಗೆ ಬರಲಿದೆ.

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್ಲೈನ್ ಮೂಲಕ ವಿತರಿಸುವ ‘ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಮುಖ್ಯ ಕಚೇರಿಯಲ್ಲಿ ಚಾಲನೆ ನೀಡಿದ್ದಾರೆ.




