
ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿಯಲ್ಲಿದ್ದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 24ನೇ ಎಸಿಜೆಎಂ ಕೋರ್ಟ್, ತಲಾ 10 ಸಾವಿರ ರೂಪಾಯಿ ಶ್ಯೂರಿಟಿ ಮೇಲೆ ಜಾಮೀನು ನೀಡಿ ಆದೇಶಿಸಿದೆ.
ಮಾರ್ಚ್ 26 ರಂದು ಈ ಇವರಿಬ್ಬರನ್ನು ಕೋರ್ಟ್ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅಲ್ಲದೆ ಕಸ್ಟಡಿ ಅವಧಿ ಮುಗಿದ ಬಳಿಕ ಅಂದರೆ, ಮಾರ್ಚ್ 28ರಂದು ಸಂಜೆ 4 ಗಂಟೆಗೆ ಇಬ್ಬರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಸೂಚಿಸಿತ್ತು. ಅದರಂತೆ ಪೊಲೀಸರು ಇಂದು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು.




