ಬಂಟ್ವಾಳ : ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಬಸ್ಸಿನಿಂದ ಇಳಿದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಮತ್ತೆ ಬಸ್ಸಿಗೆ ಹತ್ತಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

‘ಆರೋಪಿಯನ್ನು ನಾವೂರ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಉದ್ದೇಶ ಪೂರ್ವಕವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




