ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ-ಡಾ.ಆನಂದ

Share with

ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ

ಮಂಗಳೂರು: ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಸೋಮವಾರ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಡೆಂಗ್ಯು ಕೇವಲ ಜ್ವರ ಅಲ್ಲ,ಅದು ಸೋಂಕು ಹೊಂದಿದ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ.ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈ ಗೊಳ್ಳುವ ಬಗ್ಗೆ ಮಾಹಿತಿ ಅಗತ್ಯವಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್, ಐಎಂಎ ಮಂಗಳೂರು ಘಟಕದ ಅಧ್ಯಕ್ಷ ಡಾ.ವೇಣು ಗೋಪಾಲ, ಚುನಾಯಿತ ಅಧ್ಯಕ್ಷ ಡಾ.ರಂಜ ನ್, ಖಜಾಂಚಿ ಡಾ.ನಂದ ಕಿಶೋರ್,
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಖಜಾಂಚಿ ಪುಷ್ಪ ರಾಜ್ ಬಿ.ಎನ್ ಹಾಗೂ ಮಂಜುನಾಥ್ ಉಪಸ್ಥಿತರಿದ್ದರು.
ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಕಾರ್ಯ ಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *