
ತಮಿಳುನಾಡು ಬಿಜೆಪಿಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ.ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳು ಅವರ ನಿರ್ಗಮನಕ್ಕೆ ಕಾರಣವಾಗಿದೆ ಎನ್ನಲಾಗಿದೆ.





