
ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡಾ 73.45 ರಷ್ಟು ಫಲಿತಾಂಶ ದಾಖಲಾಗಿದೆ.

ಇಲಾಖೆಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಫಲಿತಾಂಶವು ಮಧ್ಯಾಹ್ನ 1.30 ರ ನಂತರ ಇಲಾಖೆಯ ಅಧಿಕೃತ ಜಾಲತಾಣಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಬಾರಿಯ ಫಲಿತಾಂಶದಲ್ಲಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. .
ರಾಜ್ಯದ ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯು ಅತ್ಯುತ್ತಮ ಸಾಧನೆ ತೋರಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯು ದ್ವಿತೀಯ ಸ್ಥಾನವನ್ನು ಗಳಿಸಿದೆ.




