
ಬದಿಯಡ್ಕ: ಅಪ್ರಾಪ್ತ ವಯಸ್ಸಿನ ಬಾಲಕಿಯ ಭಾವಚಿತ್ರವನ್ನು ಮಾರ್ಫ್ ಮಾಡಿ ಪ್ರಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಲಭಿಸಿದ ದೂರಿನಂತೆ ಸೈಬರ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬದಿಯಡ್ಕ ಠಾಣೆಗೆ ಹಸ್ತಾಂತರಿಸಲಾಗಿದೆ. ಮೂರು ಮೊಬೈಲ್ ಫೋನ್ ನಂಬ್ರಗಳಿರುವ ವ್ಯಕ್ತಿ ಈ ರೀತಿ ಚಿತ್ರವನ್ನು ಪ್ರಚಾರಮಾಡಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.ಆರೋಪಿಗಾಗಿ ಶೋಧ ನಡೆಯುತ್ತಿದೆ.




