ಮೂಡುಬಿದಿರೆ:ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ – ಆರೋಪಿ ಆರೆಸ್ಟ್

Share with

ಮೂಡುಬಿದಿರೆ : 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಮಾ. 31ರಂದು ಬೆಳುವಾಯಿಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಲಿಗೆ ನಡೆಸಿರುವುದಾಗಿಯೂ ಈ ಸಂದರ್ಭದಲ್ಲಿ ಒಪ್ಪಿಕೊಂಡಿರುತ್ತಾನೆ.

ಈ ಬಗ್ಗೆ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ದಸ್ತಗಿರಿ ಮಾಡಿದ ಆರೋಪಿಯಿಂದ ಮೇಲೆ ನಮೂದಿಸಿದ ಪ್ರಕರಣದಲ್ಲಿ ಸುಲಿಗೆ ಮಾಡಿದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಕೆಂಪು ಬಣ್ಣದ KA 20 X 3393 ನೇ TVS Apache ಮೊಟಾರು ಸೈಕಲ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *