ಕಾಸರಗೋಡು: ಜುವೆಲ್ಲರಿಯೊಂದರ ನೌಕರೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅದೇ ಸಂಸ್ಥೆಯಲ್ಲಿ ದುಡಿಯುತ್ತಿರುವ ಯುವಕನ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿದ್ದಾರೆ.

ನೀಲೇಶ್ವರ ಚಾಯೋತ್ ನಿವಾಸಿ ವಿರುದ್ಧ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಯುವತಿ ಸಂಚರಿಸುತ್ತಿದ್ದ ಸ್ಕೂಟರ್‌ನ ಹಿಂಬದಿ ಕುಳಿತು ಕಿರುಕುಳ ನೀಡಿದ್ದಾಗಿ ನೀಡಿದ ದೂರಿನಂತೆ ಕೇಸು ದಾಖಲಿಸಲಾಗಿದೆ.




