ಮಂಗಳೂರು : ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಇತರ ಹಿಂದೂ ಸಂಘಟನೆಗಳು ಇಂದು (ಮೇ 2, ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿವೆ.

ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್, “ಸುಹಾಸ್ ಶೆಟ್ಟಿ ಹಾಗೂ ಇತರ ಐದು ಜನ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ‘ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು’ ಪೂರ್ವ ಯೋಜಿತವಾಗಿ ದಾಳಿ ನಡೆಸಿ ಸುಹಾಸ್ ಅವರನ್ನು ಹತ್ಯೆ ಮಾಡಿದ್ದಾರೆ. ಇದರ ಹಿಂದೆ ನಿಷೇಧಿತ ಸಂಘಟನೆ ಪಿಎಫ್‌ಐ ಕೈವಾಡವಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಆಚರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.




