ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ: ಬಸ್ ಗಳಿಗೆ ಕಲ್ಲು ತೂರಾಟ

Share with

ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿವೆ. ಈ ಮದ್ಯೆ ಮಂಗಳೂರಿನ ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ ಪರಿಣಾಮ 3 ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ನಗರದ ಹೃದಯ ಭಾಗವಾದ ಹಂಪನಕಟ್ಟೆ ಬಳಿ ಇಂದು ಬೆಳಗ್ಗೆ ಉದ್ರಿಕ್ತ ಗುಂಪೊಂದು ಏಕಾಏಕಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದೆ. ಈ ಕೃತ್ಯದಿಂದಾಗಿ ಕನಿಷ್ಠ ಮೂರು ಬಸ್‌ಗಳ ಗಾಜುಗಳು ಪುಡಿಯಾಗಿದ್ದು, ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


Share with

Leave a Reply

Your email address will not be published. Required fields are marked *