ಹಿಮಾಚಲ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಭೂಕಂಪನದ ಅನುಭವವಾಗಿದೆ. ಲಾಹೌಲ್ ಮತ್ತು ಸ್ಪಿತಿಯಲ್ಲಿ ಭೂಕಂಪನ ಸಂಭವಿಸಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.3ರಷ್ಟು ದಾಖಲಾಗಿದೆ. ಆದರೆ, ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಉತ್ತರಾಖಂಡ, ಅಂಡಮಾನ್-ನಿಕೋಬಾರ್, ಗುಜರಾತ್, ದೆಹಲಿ ಮತ್ತು ಮಣಿಪುರ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದೆ.