ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ವಿಜಯ.

Share with

ಸಕಲೇಶಪುರ: ಮತದಾರರು ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ರೈತರಿಗೆ ಅನುಕೂಲವಾಗಬೇಕು ಹಾಗೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಬೇಕು. ಈ ನಿಟ್ಟಿನಲ್ಲಿ ಈ ಚುನಾವಣೆಯಲ್ಲಿ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಕೆಲಸ ಮಾಡಿದ ಎಲ್ಲಾರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಸಿಮೆಂಟ್ ಮಂಜು ತಿಳಿಸಿದ್ದಾರೆ

ಸಕಲೇಶಪುರ  ಕುತೂಹಲ ಕೆರಳಿಸಿದ್ದ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ.

ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು 12 ಸ್ಥಾನಗಳಿದ್ದು  ಎನ್.ಡಿ. ಎ ಅಭ್ಯರ್ಥಿ ನಿಖಿಲ್ ಹಲಸುಲಿಗೆ ಗೆಲುವು ಸಾಧಿಸಿದ್ದಾರೆ., ಸಾಲಗಾರರ ಕ್ಷೇತ್ರದಲ್ಲಿ 9 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎನ್.ಡಿ.ಎ ಅಭ್ಯರ್ಥಿಗಳಾದ ಉಷಾ, ಜಗದೀಶ್, ಜಯರಾಜು, ಜೆಸಿಂತಾ ಟೆಲ್ಲಿಸ್, ಮನುಕುಮಾ‌ರ್, ರವಿ, ಸುದೀಶ್, ಸುರೇಶ್ ಆಳ್ವ, ವೆಂಕಟೇಶ್ ಗೆಲುವು ಸಾಧಿಸಿರುತ್ತಾರೆ. 1 ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ರಾಜಶೇಖ‌ರ್ ಅವಿರೋಧವಾಗಿ ಆಯ್ಕೆಯಾಗಿದ್ದು ಮತ್ತೊಂದು ಸ್ಥಾನ ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದ್ದು ಯಾವುದೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ನಡೆದಿರುವುದಿಲ್ಲ.

ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತನಾಡಿ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಸೊಸೈಟಿಯಲ್ಲಿ ನಡೆದಿದ್ದ ವ್ಯಾಪಕ ಭ್ರಷ್ಟಚಾರದ ವಿರುದ್ದ ಈ ಬಾರಿ ಎನ್.ಡಿ.ಎ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ಶಾಸಕ ಸಿಮೆಂಟ್ ಮಂಜು ಹಾಗೂ ಮಾಜಿ ಶಾಸಕ ಹೆಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಚುನಾವಣೆ ನಡೆದಿದ್ದು ಎನ್.ಡಿ.ಎ ಅಭ್ಯರ್ಥಿಗಳು ಕ್ಲೀನ್ ಸ್ವೀಪ್ ಮಾಡಿದ್ದು ಮುಂದಿನ ದಿನಗಳಲ್ಲಿ ಕೃಷಿ ಪತ್ತಿನ ಸಹಕಾರ ಸಂಘವನ್ನು ಅಭಿವೃದ್ಧಿಯ ಪಥದಲ್ಲಿ ಎನ್.ಡಿ.ಎ ಅಭ್ಯರ್ಥಿಗಳು ತೆಗೆದುಕೊಂಡು ಹೋಗಲಿದ್ದಾರೆ ಎಂದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಜೆಡಿಎಸ್ ಮುಖಂಡ ಸುಪ್ರದೀಪ್‌ ಯಜಮಾನ್ ಮಾತನಾಡಿ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಎನ್.ಡಿ.ಎ ಬೆಂಬಲಿತರು ಮೊಟ್ಟ ಮೊದಲ ಬಾರಿಗೆ ಅಧಿಕಾರ ಹಿಡಿಯುವ ಮುಖಾಂತರ ಹೊಸ ಇತಿಹಾಸ ಸೃಷ್ಟಿಯಾಗಿದೆ. ತಾಲೂಕಿನಲ್ಲಿ ಎನ್.ಡಿ.ಎ ಮೈತ್ರಿಕೂಟ ಸುಭದ್ರವಾಗಿದ್ದು ಎರಡು ಪಕ್ಷಗಳ ಮುಖಂಡರು ಒಗ್ಗಟ್ಟಿನಿಂದ ಎಲ್ಲಾ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಹೇಳಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಕುಮಾ‌ರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖ‌ರ್, ಬಿರಡಹಳ್ಳಿ ಗ್ರಾ.ಪಂ ಅಧ್ಯಕ್ಷ ಸತೀಶ್‌, ಪುರಸಭಾ ಸದಸ್ಯ ಆದರ್ಶ, ಎಪಿಎಂಸಿ ಮಾಜಿ ಅಧ್ಯಕ್ಷ ಕವನ್ ಗೌಡ, ಬಿಜೆಪಿ ನಗರ ಅಧ್ಯಕ್ಷ ಲೋಕೇಶ್, ಬಿಜೆಪಿ ಮುಖಂಡ ಎ.ವಿ ನರೇಶ್, ಪುನೀತ್ ಬನ್ನಹಳ್ಳಿ ಮುಂತಾದವರು ಹಾಜರಿದ್ದರು.


Share with

Tags:

Leave a Reply

Your email address will not be published. Required fields are marked *