ಬೆಂಗಳೂರು: ಹೊಸೂರು ರಸ್ತೆಯಲ್ಲಿ ವಾಹನ ಸಂಚಾರ ಬಂದ್

Share with

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ಅಪಾರ ಪ್ರಮಾಣದ ಮಳೆ ನೀರು ರಸ್ತೆಗೆ ಹರಿದು ಬರುತ್ತಿರುವ ಹಿನ್ನೆಲೆ ಹೊಸೂರು ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ರೂಪೇನ ಅಗ್ರಹಾರದವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಸಂಚಾರ ಪೊಲೀಸರು ಎಲಿವೆಟೇಡ್ ಫೈಓವರ್ ಕೂಡ ಬಂದ್‌ ಮಾಡಿದ್ದಾರೆ. ಪರ್ಯಾಯ ಮಾರ್ಗ ಬಳಸುವಂತೆ ನಗರ ಸಂಚಾರ ಪೊಲೀಸರು ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ.


Share with