
ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಮತ್ತೊಂದು ಭೀಕರ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ 20 ನಕ್ಸಲೀಯರು ಸತ್ತಿದ್ದು, ಹಲವರು ಗಾಯಗೊಂಡಿದ್ದಾರೆ.

ನಾರಾಯಣಪುರ, ಬಿಜಾಪುರ್ ಮತ್ತು ದಂತೇವಾಡದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಕಾಳಗ ನಡೆಯುತ್ತಿದ್ದು, ನಕ್ಸಲೀಯರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಭದ್ರತಾ ಪಡೆ ಸಿಬ್ಬಂದಿ ದೊಡ್ಡ ನಕ್ಸಲೈಟ್ ನಾಯಕರನ್ನು ಸುತ್ತುವರೆದಿದ್ದಾರೆ ಎಂದು ಹೇಳಲಾಗುತ್ತಿದೆ.




