
ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆಗೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ಸಂದರ್ಭದಲ್ಲೂ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಹೇಳಿದರು.

ಜರ್ಮನಿಯ ವಿದೇಶಾಂಗ ಸಚಿವರೊಂದಿಗೆ ಜಂಟಿ ಸಭೆ ನಡೆಸಿದ ನಂತರ ಮಾತನಾಡಿದ ಅವರು ಭಾರತ, ಪಾಕ್ ಜೊತೆ ದ್ವಿಪಕ್ಷೀಯವಾಗಿ ವ್ಯವಹರಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಪ್ರತಿಯೊಂದು ದೇಶವೂ ಭಯೋತ್ಪಾದನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಹೊಂದಿದೆ ಎಂದು ಹೇಳಿದರು.




