
ಸಕಲೇಶಪುರ: ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ ಇಂದು ನಡೆಸಲಾಯಿತು. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಧು ಕುಮಾರ್ ,ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಯರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಮಧುಕುಮಾರ್ ಮಾತನಾಡಿ ನಷ್ಟದಲ್ಲಿರುವ ಈ ಸೊಸೈಟಿಯನ್ನು ಶಾಸಕ ಸಿಮೆಂಟ್ ಮಂಜು, ಮಾಜಿ ಸಚಿವರಾದ ಹೆಚ್.ಕೆ.ಕುಮಾರ ಸ್ವಾಮಿ ಹಾಗೂ ಎಲ್ಲಾ ನಿರ್ದೇಶಕರ ನೆರವಿನಿಂದ ಲಾಭದ ಹಾದಿಗೆ ತರುವುದು ನಮ್ಮೆಲ್ಲರ ಆದ್ಯತೆಯಾಗಿದೆ ಎಂದರು.ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು,ಮಾಜಿ ಸಚಿವ ಹೆಚ್.ಕೆ.ಕುಮಾರಸ್ವಾಮಿ, ಟಿಎಪಿಸಿಎಮ್‌ಎಸ್ ಅಧ್ಯಕ್ಷ ಶಶಿಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ಇತರ ನಿರ್ದೇಶಕರು ಹಾಜರಿದ್ದರು





