
ಸಕಲೇಶಪುರ: ತಾಲ್ಲೂಕಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸಕಲೇಶಪುರ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದೆ.
1. ರಾಷ್ಟ್ರೀಯ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆ: ಕಾಳುಮೆಣಸು ಪುನಶ್ವೇತನ, ವೈಯುಕ್ತಿಕ ನೀರು ಸಂಗ್ರಹಣಾ ಘಟಕ, ಸಮಗ್ರ ಪೋಷಕಾಂಶ/ಪೀಡೆ ನಿರ್ವಹಣೆ, ವೀಡ್ ಮ್ಯಾಟ್, ಜೇನು ಪೆಟ್ಟಿಗೆ, ಟ್ರ್ಯಾಕ್ಟರ್ Upto-20 HP ಪ್ರಾಥಮಿಕ ಸಂಸ್ಕರಣಾ ಘಟಕ, ಹಾಗೂ ಸೋಲಾರ್ ಕ್ರಾಪ್ ಡ್ರೈಯರ್ ನಿರ್ಮಾಣಕ್ಕೆ ಸಹಾಯಧನ ಲಭ್ಯವಿರುತ್ತದೆ.
2. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಲಭ್ಯವಿದೆ.
3. ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗಕ್ಕೆ ಶೇ.40 ರಷ್ಟು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗಗಳ ರೈತರಿಗೆ ಶೇ.50 ರಷ್ಟು ಸಹಾಯಧನ ಲಭ್ಯವಿದೆ.
4. ತಾಳೆ ಬೆಳೆ ಅಭಿವೃದ್ಧಿ ಯೋಜನೆ ಅಡಿ ಹೊಸ ತಾಳೆ ತೋಟ ಅಭಿವೃದ್ಧಿ ಪಡಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಅವಕಾಶವಿರುತ್ತದೆ.
5. ಜೇನು ಕೃಷಿ ಅಭಿವೃದ್ಧಿ ಯೋಜನೆ ಅಡಿ ಜೇನುಪೆಟ್ಟಿಗೆಗಳಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90ರಷ್ಟು ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.75 ರಷ್ಟು ಸಹಾಯಧನ ಪಡೆಯಬಹುದಾಗಿರುತ್ತದೆ.
6. RKVY ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.50 ರಷ್ಟು ಸಹಾಯಧನ ಪಡೆಯಬಹುದಾಗಿರುತ್ತದೆ,
ಈ ಎಲ್ಲಾ ಯೋಜನೆಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಜೂನ್ 31 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.





