
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಯಕ್ಷಗಾನ ಕಲಾವಿದೆ ಆಗಿರುವ ಬಹುಮುಖಿ ಪ್ರತಿಭೆ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ.

ಬೆಂಗಳೂರಿನ ಯಕ್ಷತರಂಗದಲ್ಲಿ ಯಕ್ಷಗಾನ ಕಲಿಯುತ್ತಿದ್ದ ದಕ್ಷಿಣ ಕನ್ನಡ ಮೂಲದ ಚಿನ್ಮಯಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಈ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.




